Thursday, January 31, 2013

ಕುವೆಂಪು-ತನುವು ನಿನ್ನದು ಮನವು ನಿನ್ನದು

ದೋಣಿ ಸಾಗಲಿ...

- ಕುವೆಂಪು

ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ
ಬೀಸುಗಾಳಿಗೆ ಬೀಳು ತೇಲುವ ತೆರೆಯ ಮೇಗಡೆ ಹಾರಲಿ ||

ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ
ಮೇಘ ಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ
ನೋಡಿ ಮೂದನದಾ ದಿಗಂತದಿ ಮೂಡು ವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ

ಕೆರೆಯ ಅಂಚಿನ ಮೇಲೆ ಮಿಂಚಿನ ಹನಿಗಳಂದದಿ ಹಿಮಮಣಿ
ಮಿನ್ಚುತೀಪು ಮೂಡು ತೈತಾರೆ ಬಾಲಕೋಮಲ ದಿನಮಣಿ
ಹಸಿರು ಜೋಳದ ಹೊಲದ ಗಾಳಿಯು ತೀಡಿ ತಣ್ಣಗೆ ಬರುತಿರೆ
ಹುದುಗಿ ಹಾಡುವ ಮತ್ತ ಕೋಕಿಲ ಮಧುರ ವಾಣಿಯ ತರುತಿರೆ

ದೂರ ಬೆಟ್ಟದ ಮೇಲೆ ತೇಲುವ ಬಿಳಿಯ ಮೋಡವ ನೋಡಿರಿ
ಅದನೆ ಹೋಲುತ ಅಂತೆ ತೇಲುತ ದೋಣಿಯಾಟವ ನಾಡಿರಿ
ನಾವು ಲೀಲಾಮಾತ್ರ ಜೀವರು ನಮ್ಮ ಜೀವನ ಲೀಲೆಗೆ
ನೆನ್ನೆ ನೆನ್ನೆಗೆ ಇಂದು ಇಂದಿಗೆ ಇರಲಿ ನಾಳೆಯು ನಾಳೆಗೆ
! ನನ್ನ ಚೇತನ...

-ಕುವೆಂಪು

! ನನ್ನ ಚೇತನ
ಆಗು ನೀ ಅನಿಕೇತನ ||

ರೂಪ ರೂಪಗಳನು ದಾಟಿ
ನಾಮ ಕೋಟಿಗಳನು ಮೀಟಿ
ಎದೆಯ ಬಿರಿಯ ಭಾವದೀಟಿ

ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದೆಲ್ಲೆ ಮೀರಿ
ನಿರ್ದಿಗಂತವಾಗಿ ಏರಿ

ಎಲ್ಲಿಯೂ ನಿಲ್ಲದಿರು
ಮನೆಯನೆಂದು ಕಟ್ಟದಿರು
ಕೊನೆಯನೆಂದು ಮುಟ್ಟದಿರು
! ಅನಂತವಾಗಿರು

ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ
ಅನಂತ ನೀ ಅನಂತವಾಗು
ಆಗು ಆಗು ಆಗು ಆಗು
ತೆರೆದಿದೆ ಮನೆ ...

- ಕುವೆಂಪು

ತೆರೆದಿದೆ ಮನೆ ಬಾ ಅಥಿತಿ ||
ಹೊಸ ಬೆಳಕಿನ ಹೊಸ ಗಾಳಿಯ
ಹೊಸ ಬಾಳನು ತಾ ಅಥಿತಿ

ಆವ ರೂಪದೊಳು ಬಂದರು ಸರಿಯೇ
ಆವ ವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಗೆಯ ಬಾ
ತಿಂಗಳಂದದಲಿ ಬಗೆಯ ಬಾ

ಇಂತಾದರು ಬಾ ಅಂತಾದರೂ ಬಾ ಎಂತಾದರು ಬಾ ಬಾ ಬಾ
ಬೇಸರವಿದನು ಸರಿಸುವ ಹೊಸಬಾಳ ಉಸಿರಾಗಿ ಬಾ ಬಾ ಬಾ

ಕಡಲಾಗಿ ಬಾ ಬಾನಾಗಿ ಬಾ ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿ ಗಿರಿಯಾಗಿ ಕಾನಾಗಿ
ತೆರೆದಿದೆ ಮನವು ಬಾ
ಹೊಸತಾನದ ಹೊಸಗಾನದ
ರಸ ಜೀವ ತಾ ತಾ ತಾ
ಬಾರಿಸು ಕನ್ನಡ...

- ಕುವೆಂಪು

ಬಾರಿಸು ಕನ್ನಡ ಡಿಂಡಿಮವ ||
! ಕರ್ನಾಟಕ ಹೃದಯ ಶಿವ

ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ವಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು

ಚೈತ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ
ತನುವು ನಿನ್ನದು...

- ಕುವೆಂಪು

ತನುವು ನಿನ್ನದು ಮನವು ನಿನ್ನದು ||
ಎನ್ನ ಜೀವನ ಧನವು ನಿನ್ನದು
ನಾನು ನಿನ್ನವನೆಂಬ ಹೆಮ್ಮೆಯ
ಋಣವು ಮಾತ್ರವೇ ನನ್ನದು

ನೀನು ಹೊಳೆದರೆ ನಾನು ಹೊಳೆವೆನು
ನೀನು ಬೆಳೆದರೆ ನಾನು ಬೆಳೆವೆನು
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು

ನನ್ನ ಮನದಲಿ ನೀನೆ ಯುಕ್ತಿ
ನನ್ನ ಹೃದಯದಿ ನೀನೆ ಭಕ್ತಿ
ನೀನೆ ಮಾಯಾ ಮೋಹ ಶಕ್ತಿ
ನನ್ನ ಜೀವನ ಮುಕ್ತಿಯು

! ನನ್ನ ಚೇತನ...

-ಕುವೆಂಪು

! ನನ್ನ ಚೇತನ
ಆಗು ನೀ ಅನಿಕೇತನ ||

ರೂಪ ರೂಪಗಳನು ದಾಟಿ
ನಾಮ ಕೋಟಿಗಳನು ಮೀಟಿ
ಎದೆಯ ಬಿರಿಯ ಭಾವದೀಟಿ

ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದೆಲ್ಲೆ ಮೀರಿ
ನಿರ್ದಿಗಂತವಾಗಿ ಏರಿ

ಎಲ್ಲಿಯೂ ನಿಲ್ಲದಿರು
ಮನೆಯನೆಂದು ಕಟ್ಟದಿರು
ಕೊನೆಯನೆಂದು ಮುಟ್ಟದಿರು
! ಅನಂತವಾಗಿರು

ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ
ಅನಂತ ನೀ ಅನಂತವಾಗು
ಆಗು ಆಗು ಆಗು ಆಗು



No comments: