Thursday, January 31, 2013

- ಬಿ. ಎಂ. ಶ್ರೀಕಂಠಯ್ಯ-ಕರುನಾಳು ಬಾ ಬೆಳಕೆ

- ಬಿ. ಎಂ. ಶ್ರೀಕಂಠಯ್ಯ

ಕರುನಾಳು ಬಾ ಬೆಳಕೆ ಮುಸುಕಿದಿ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು ||
ಇರುಳು ಕತ್ತಲೆಯಾ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು

ಹೇಳಿ ನನ್ನಡಿ ಇಡಿಸು ಬಲು ದೂರ ನೋಟವನು
ಕೇಳಿದೊಡನೆಯೆ ಸಾಕು ನನಗೊಂದು ಹೆಜ್ಜೆ
ಮೊನ್ನೆ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು

ಇಷ್ಟು ದಿನ ಸಲಹಿರುವೆ ಮೂರ್ಖನನು ನೀನು
ಮುಂದೆಯೂ ಕೈ ಹಿಡಿದು ನಡೆಸದಿಹೆಯಾ?
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯ ?
ಬೆಳಗಾಗ ಹೊಳೆಯದೆ ಹಿಂದೊಮ್ಮೆ ನಾನೊಲಿದು
ನಡುವೆ ಕಳಕೊಂಡ ದಿವ್ಯ ಮುಖ ನಗುತಾ


No comments: